ADVERTISEMENT

ಹೈದರಾಬಾದ್: ಲಾರಿಗೆ ವ್ಯಾನ್ ಡಿಕ್ಕಿ, 4 ಮಂದಿ ಸಾವು

ಪಿಟಿಐ
Published 16 ಮೇ 2023, 10:40 IST
Last Updated 16 ಮೇ 2023, 10:40 IST
   

ಹೈದರಾಬಾದ್: ತಡರಾತ್ರಿ ಇಲ್ಲಿನ ತುರಕಯಾಂಜಲ್ ಬಳಿ ಲಾರಿ, ವ್ಯಾನಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು 4 ಮಂದಿ ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಭಾನುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಜನರಿದ್ದ ವ್ಯಾನಿಗೆ ಹಿಂಬದಿಯಿಂದ ಸಿಮೆಂಟ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಗಾಯಗೊಂಡ ನಾಲ್ವರಿಗೆ ಚಿಕಿತ್ಸೆ ನಡೆಯುತ್ತಿದ್ದು, ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.