ADVERTISEMENT

ಉತ್ತರಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು

ಏಜೆನ್ಸೀಸ್
Published 25 ಫೆಬ್ರುವರಿ 2024, 8:59 IST
Last Updated 25 ಫೆಬ್ರುವರಿ 2024, 8:59 IST
<div class="paragraphs"><p>ಕೌಶಾಂಬಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ&nbsp;ಸ್ಫೋಟ</p></div>

ಕೌಶಾಂಬಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ

   

(ಚಿತ್ರ ಕೃಪೆ–ಎಎನ್‌ಐ)

ಕೌಶಾಂಬಿ: ಉತ್ತರ ಪ್ರದೇಶದ ಕೌಶಾಂಬಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ (ಇಂದು) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕೌಶಾಂಬಿಯ ಭರ್ವಾರಿ ಪಟ್ಟಣದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.

'ಅವಘಡದಲ್ಲಿ 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ವಸತಿ ಪ್ರದೇಶದಿಂದ ದೂರದಲ್ಲಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.