ADVERTISEMENT

ನೊಯ್ಡಾ: ಹೌಸಿಂಗ್‌ ಸೊಸೈಟಿ ಗೋಡೆ ಕುಸಿದು ನಾಲ್ವರು ಕಾರ್ಮಿಕರ ಸಾವು

ಪಿಟಿಐ
Published 20 ಸೆಪ್ಟೆಂಬರ್ 2022, 11:03 IST
Last Updated 20 ಸೆಪ್ಟೆಂಬರ್ 2022, 11:03 IST
ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ನಡೆಯಿತು –ಪಿಟಿಐ
ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ನಡೆಯಿತು –ಪಿಟಿಐ   

ನೊಯ್ಡಾ (ಉತ್ತರ ಪ್ರದೇಶ): ಇಲ್ಲಿನ ಹೌಸಿಂಗ್‌ ಸೊಸೈಟಿಯೊಂದರ ಆವರಣಗೋಡೆ ಕುಸಿದು ನಾಲ್ವರು ಕಾರ್ಮಿಕರು ಮಂಗಳವಾರ ಮೃತಪಟ್ಟಿದ್ದಾರೆ.

ದುರ್ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನೊಯ್ಡಾದ ಸೆಕ್ಟರ್‌ 21ರಲ್ಲಿರುವ ‘ಜಲ್‌ ವಾಯು ವಿಹಾರ್‌’ ಹೌಸಿಂಗ್‌ ಸೊಸೈಟಿಯ ಬಳಿ ಚರಂಡಿ ಕಾಮಗಾರಿ ನಿರ್ವಹಿಸುತ್ತಿದ್ದಾಗ ಕಾರ್ಮಿಕರ ಮೇಲೆ ಆವರಣಗೋಡೆ ಕುಸಿದಿದೆ. ಈ ವೇಳೆ 12 ಮಂದಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಟು ಮಂದಿಯನ್ನು ರಕ್ಷಿಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದೂ ಹೇಳಿದ್ದಾರೆ. ಕಾರ್ಮಿಕರನ್ನು ಕರೆತಂದಿದ್ದ ಗುತ್ತಿಗೆದಾರ ಗುಲ್‌ ಮೊಹಮ್ಮದ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.