ADVERTISEMENT

ಜಮ್ಮು ಮತ್ತು ಕಾಶ್ಮೀರ ಎನ್‌ಕೌಂಟರ್: ನಾಲ್ವರು ಉಗ್ರರ ಹತ್ಯೆ

ಪಿಟಿಐ
Published 5 ಅಕ್ಟೋಬರ್ 2022, 10:29 IST
Last Updated 5 ಅಕ್ಟೋಬರ್ 2022, 10:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎರಡು ಪ್ರತ್ಯೇಕ ಗುಂಡಿನ ಕಾಳಗದಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೋಪಿಯಾನ್‌ನ ದ್ರಾಚ್‌ ಪ್ರದೇಶದಲ್ಲಿ ಜೈಷ್–ಎ–ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಮತ್ತು ದಕ್ಷಿಣ ಕಾಶ್ಮೀರದ ಮೂಲ್‌ ಪ್ರದೇಶದಲ್ಲಿ ಲಷ್ಕರ್‌ ಎ ತಯಬಾ ಸಂಘಟನೆಯಒಬ್ಬ ಉಗ್ರನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

‘ದ್ರಾಚ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೃತಪಟ್ಟ ಉಗ್ರರ ಪೈಕಿ ಇಬ್ಬರನ್ನು ಹನನ್‌ ಬಿನ್‌ ಯಾಕೂಬ್‌ ಮತ್ತು ಜಮ್ಶೆಡ್‌ ಎಂದು ಗುರುತಿಸಲಾಗಿದೆ.ಇವರು ಅ.2ರಂದು ಪುಲ್ವಾಮಾದಲ್ಲಿ ನಡೆದ ವಿಶೇಷ ಪೊಲೀಸ್ ಅಧಿಕಾರಿ ಜಾವೇದ್‌ ದಾರ್‌ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ವಿಜಯ್‌ ಕುಮಾರ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.