ADVERTISEMENT

ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 6:02 IST
Last Updated 26 ಫೆಬ್ರುವರಿ 2020, 6:02 IST
ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ
ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ   

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪರ–ವಿರುದ್ಧದ ಪ್ರತಿಭಟನೆಯು ಕೋಮು ಸಂಘರ್ಷಕ್ಕೆ ತಿರುಗಿದ ಪರಿಣಾಮ ರಾಷ್ಟ್ರ ರಾಜಧಾನಿಯ ಈಶಾನ್ಯ ಭಾಗದ ಕೆಲವು ಭಾಗಗಳಲ್ಲಿ ಮತ್ತಷ್ಟು ಹಿಂಸಾಚಾರ ನಡೆದಿದೆ. ಹಿಂಸಾಚಾರಕ್ಕೆ ಮತ್ತೆ ಏಳು ಜನರುಬಲಿಯಾಗಿದ್ದು, ಒಟ್ಟು ಮೃತಪಟ್ಟವರ 20ಕ್ಕೆ ಏರಿಕೆಯಾಗಿದೆ.

ಗುರು ತೇಜ್ ಬಹದ್ದೂರ್ ಆಸ್ಪತ್ರೆಯು ಬುಧವಾರ ಮುಂಜಾನೆ ಮಾಧ್ಯಮಗಳಿಗೆ ನೀಡಿರುವ ಮಾಹಿತಿ ಅನ್ವಯ ಹಿಂಸಾಚಾರದಲ್ಲಿ ಗಾಯಗೊಂಡಿದ್ದ ಏಳು ಜನರುಮೃತಪಟ್ಟಿದ್ದಾರೆ. ಹಿಂಸಾಚಾರದಲ್ಲಿ ಸುಮಾರು 189ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಈ ಮಧ್ಯೆ ಪೊಲೀಸರು ನಿನ್ನೆಯಿಂದಲೂ ಈಶಾನ್ಯ ದೆಹಲಿಯಿಂದ ಗಾಜಿಯಾಬಾದ್‌ಗೆ ಹೋಗುವ ಎಲ್ಲ ರಸ್ತೆಗಳಿಗೂ ಬ್ಯಾರಿಕೇಡ್‌ಗಳನ್ನು ಹಾಕಿ ಬಂದ್ ಮಾಡಿದ್ದಾರೆ.

ADVERTISEMENT

'ದೆಹಲಿಯಲ್ಲಿನ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ನಾವು ಗಡಿಗಳನ್ನು ಮುಚ್ಚಿದ್ದೇವೆ. ನಮ್ಮ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಸಮೀಪದ ಪ್ರದೇಶಗಳಲ್ಲಿ ಈಗಾಗಲೇ ಮದ್ಯದ ಅಂಗಡಿಗಳನ್ನು ಮುಚ್ಚಿದ್ದೇವೆ' ಎಂದು ಜಿಲ್ಲಾಧಿಕಾರಿ ಅಜಯ್ ಕುಮಾರ್ ಪಾಂಡೆತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಿಂಸಾಚಾರದಲ್ಲಿ ಗಾಯಗೊಂಡ ಶಹದಾರಾ ಡಿಸಿಪಿ (ಪೊಲೀಸ್ ಉಪ ಆಯುಕ್ತ) ಅಮಿತ್ ಶರ್ಮಾ ಅವರ ಕುಟುಂಬದೊಂದಿಗೆ ಮಾತನಾಡಿದ್ದಾರೆ ಮತ್ತು ಅವರ ಆರೋಗ್ಯದ ಕುರಿತು ವಿಚಾರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.