ಪ್ರಾತಿನಿಧಿಕ ಚಿತ್ರ
ನವದೆಹಲಿ: ದೆಹಲಿಯ ಪ್ರೇಮ್ ನಗರದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
‘ಬೆಳಗಿನ ಜಾವ 3.30ರ ವೇಳೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಇಲಾಖೆಗೆ ಮಾಹಿತಿ ಬಂದಿದ್ದು, ಸ್ಥಳಕ್ಕೆ ಎರಡು ಅಗ್ನಿಶಾಮಕ ಟೆಂಡರ್‌ಗಳನ್ನು ಕಳುಹಿಸಿಕೊಡಲಾಗಿತ್ತು’ ಎಂದು ಅವರು ತಿಳಿಸಿದರು.
‘ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅದಾಗ್ಯೂ ಹೊಗೆಯಿಂದ ಉಸಿರಾಟದ ತೊಂದರೆ ಅನುಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ’ ಎಂದು ಅವರು ತಿಳಿಸಿದರು.
‘ಇನ್ವರ್ಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಟ್ಟಡದ ಮೊದಲನೇ ಮಹಡಿಗೆ ವ್ಯಾಪಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.