ನವದೆಹಲಿ: ವಾಯವ್ಯ ದೆಹಲಿಯ ರಿಥಲಾದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ರೋಹಿಣಿ ಸೆಕ್ಟರ್-5ರಲ್ಲಿರುವ ಕಾರ್ಖಾನೆಯಲ್ಲಿ ಸಂಜೆ 7.25ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಇಡೀ ಕಾರ್ಖಾನೆಯನ್ನು ವ್ಯಾಪಿಸಿತ್ತು. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿದ್ದಾರೆ.
ಮಾಹಿತಿ ತಿಳಿದು 16 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿದವು ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗಾರ್ಗ್ ತಿಳಿಸಿದ್ದಾರೆ.
ನಾಪತ್ತೆಯಾದವರಿಗಾಗಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.