ADVERTISEMENT

ದೆಹಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ಸಾವು, 12 ಮಂದಿ ರಕ್ಷಣೆ

ಪಿಟಿಐ
Published 28 ಜನವರಿ 2025, 1:54 IST
Last Updated 28 ಜನವರಿ 2025, 1:54 IST
<div class="paragraphs"><p>ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಪೊಲೀಸರು</p></div>

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಪೊಲೀಸರು

   

–ಪಿಟಿಐ ಚಿತ್ರ

ನವದೆಹಲಿ: ಉತ್ತರ ದೆಹಲಿಯ ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಆಸ್ಕರ್ ಪಬ್ಲಿಕ್ ಸ್ಕೂಲ್ ಬಳಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವು ಸೋಮವಾರ ರಾತ್ರಿ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ದೆಹಲಿ ಪ್ರವಾಹ ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ), ರಾಷ್ಟ್ರೀಯ ವಿಪತ್ತು ನಿರ್ವಹಣೆ ‍ಪಡೆ (ಎನ್‌ಡಿಆರ್‌ಎಫ್‌) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ವರದಿಯಾಗಿದೆ.

‘ನಮ್ಮ ತಂಡದವರು ಈಗಾಗಲೇ ಮೂವರು ಮಹಿಳೆಯರು ಸೇರಿದಂತೆ 12 ಮಂದಿಯನ್ನು ರಕ್ಷಣೆ ಮಾಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಒಂಬತ್ತು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ’ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗಾರ್ಗ್ ತಿಳಿಸಿದ್ದಾರೆ.

‘ಬುರಾರಿಯಲ್ಲಿ ಕಟ್ಟಡ ಕುಸಿತದ ಘಟನೆ ಅತ್ಯಂತ ದುಃಖಕರವಾಗಿದೆ. ತ್ವರಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ನಾನು ಸ್ಥಳೀಯ ಆಡಳಿತದೊಂದಿಗೆ ಮಾತನಾಡಿದ್ದೇನೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲಾಗುವುದು’ ಎಂದು ದೆಹಲಿ ಮುಖ್ಯಮಂತ್ರಿ ಆತಿಶಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಈ ಘಟನೆ ಅತ್ಯಂತ ದುಃಖಕರವಾಗಿದೆ. ಬುರಾರಿಯ ನಮ್ಮ ಶಾಸಕ ಸಂಜೀವ್ ಝಾ ಅವರು ತಕ್ಷಣ ಪಕ್ಷದ ಕಾರ್ಯಕರ್ತರೊಂದಿಗೆ ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ಆಡಳಿತಕ್ಕೆ ಸಹಾಯ ಮಾಡಲು ಸೂಚನೆ ನೀಡಲಾಗಿದೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲಾಗುವುದು’ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.