ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಪೊಲೀಸರು
–ಪಿಟಿಐ ಚಿತ್ರ
ನವದೆಹಲಿ: ಉತ್ತರ ದೆಹಲಿಯ ಬುರಾರಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, 21 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಕರ್ ಪಬ್ಲಿಕ್ ಸ್ಕೂಲ್ ಬಳಿ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವು ಸೋಮವಾರ ರಾತ್ರಿ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ದೆಹಲಿ ಪ್ರವಾಹ ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ), ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ವರದಿಯಾಗಿದೆ.
ಬುರಾರಿಯಲ್ಲಿ ಕಟ್ಟಡ ಕುಸಿತದ ಘಟನೆ ಅತ್ಯಂತ ದುಃಖಕರವಾಗಿದೆ. ತ್ವರಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಆತಿಶಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.