ADVERTISEMENT

ಪೂಂಚ್‌ನಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಪಿಟಿಐ
Published 18 ಜುಲೈ 2023, 4:17 IST
Last Updated 18 ಜುಲೈ 2023, 4:17 IST
   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭದ್ರತಾ ಪಡೆ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರ ಅಡಗುದಾಣವನ್ನು ಗುರಿಯಾಗಿಸಿಕೊಂಡು ಸೋಮವಾರ ರಾತ್ರಿಯಿಂದ ಸುರನ್‌ಕೋಟೆ ಬೆಲ್ಟ್‌ನ ಸಿಂಧರಾ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಉಗ್ರರ ಜೊತೆ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.