ADVERTISEMENT

ನಾಲ್ವರು ಉಗ್ರರ ಹತ್ಯೆ: ಮೂವರ ಬಂಧನ

ಪಿಟಿಐ
Published 1 ನವೆಂಬರ್ 2022, 19:57 IST
Last Updated 1 ನವೆಂಬರ್ 2022, 19:57 IST
   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು ನಾಲ್ಕು ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದೆ. ಮೂವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

‘ಪುಲ್ವಾಮ ಜಿಲ್ಲೆಯ ಖಾಂಡಿಪೊರಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಹಾಗೂ ಅನಂತನಾಗ್‌ ಜಿಲ್ಲೆಯ ಸೆಮತಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಯವರು ಕೊಂದಿದ್ದಾರೆ. ಶ್ರೀನಗರ ಮತ್ತು ಬಡಗಾಮ್‌ ಜಿಲ್ಲೆಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಷ್ಕರ್‌ ಎ ತೈಯಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಮೂವರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.

‘ಉಗ್ರರಿಂದ ಎರಡು ಎಕೆ ರೈಫಲ್‌ಗಳು ಮತ್ತು ಪಿಸ್ತೂಲ್‌ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.