ADVERTISEMENT

ತಮಿಳುನಾಡು: ಟೋಕನ್‌ ಪಡೆಯುತ್ತಿದ್ದ ವೇಳೆ ನೂಕುನುಗ್ಗಲು, ನಾಲ್ವರು ಮಹಿಳೆಯರ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2023, 16:15 IST
Last Updated 4 ಫೆಬ್ರುವರಿ 2023, 16:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.

ಉಚಿತ ಸೀರೆ, ಬಟ್ಟೆಗಳನ್ನು ತೆಗೆದುಕೊಳ್ಳಲು ಟೋಕನ್ ಪಡೆಯಲು ಜನರು ಸಾಲುಗಟ್ಟಿ ನಿಂತಿದ್ದರು. ಇದೇ ವೇಳೆ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತಕ್ಕೆ ಸಿಲುಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುಪ್ಪತ್ತೂರಿನ ವಾಣಿಯಂಬಾಡಿಯಲ್ಲಿ ವ್ಯಕ್ತಿಯೊಬ್ಬರು ಉಚಿತ ಬಟ್ಟೆಗಳನ್ನು ವಿತರಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

‘ಉಚಿತ ಬಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ಕುರಿತು ಆಯೋಜಕರು ಅನುಮತಿ ಪಡೆದಿರಲಿಲ್ಲ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿರುಪತ್ತೂರು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

₹2 ಲಕ್ಷ ಪರಿಹಾರ: ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.