ADVERTISEMENT

ಕಲ್ಲಿದ್ದಲು ಗಣಿಯ ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸಾವು

ಪಿಟಿಐ
Published 10 ನವೆಂಬರ್ 2021, 15:07 IST
Last Updated 10 ನವೆಂಬರ್ 2021, 15:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಸರ್ಕಾರಿ ಸ್ವಾಮ್ಯದ ಸಿಂಗರೇಣಿ (ಎಸ್‌ಸಿಸಿಎಲ್) ಕಲ್ಲಿದ್ದಲು ಗಣಿಯಲ್ಲಿ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಬುಧವಾರ ಸಾವನ್ನಪ್ಪಿದ್ದಾರೆ.

ಶ್ರೀರಾಂಪುರ ಪ್ರದೇಶದಲ್ಲಿ ಮೇಲ್ಛಾವಣಿ ಹೊದಿಸುತ್ತಿರುವಾಗ ಈ ಘಟನೆ ಸಂಭವಿಸಿದೆ ಎಂದು ಎಸ್‌ಸಿಸಿಎಲ್ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ.

32 ಮತ್ತು 60 ವರ್ಷ ವಯಸ್ಸಿನ ನಾಲ್ವರು ಕಾರ್ಮಿಕರ ಮೇಲೆಮೇಲ್ಛಾವಣಿಯ ಒಂದು ಭಾಗವು ಬಿದ್ದಿದ್ದು, ಅವಶೇಷಗಳಡಿ ಕಾರ್ಮಿಕರು ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ಎಸ್‌ಸಿಸಿಎಲ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್.ಶ್ರೀಧರ್ ಅವರು ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ಅಲ್ಲದೆ, ಘಟನೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.

ಮೃತರ ಕುಟುಂಬದ ಒಬ್ಬ ಅರ್ಹ ಸದಸ್ಯರಿಗೆ ₹70 ಲಕ್ಷದಿಂದ ₹1 ಕೋಟಿ ಪರಿಹಾರ ನೀಡುವ ಜೊತೆಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಉನ್ನತ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.