ADVERTISEMENT

ದೆಹಲಿಯ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್‌ ಉಚಿತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಏಪ್ರಿಲ್ 2022, 16:11 IST
Last Updated 21 ಏಪ್ರಿಲ್ 2022, 16:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: 18 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹ ಫಲಾನುಭವಿಗಳಿಗೆ ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ (ಬೂಸ್ಟರ್‌ ಡೋಸ್‌) ಅನ್ನು ಉಚಿತವಾಗಿ ನೀಡಲಾಗುವುದು ಎಂದು ದೆಹಲಿ ಸರ್ಕಾರ ಗುರುವಾರ ಪ್ರಕಟಿಸಿದೆ.

ದೆಹಲಿ ವ್ಯಾಪ್ತಿಯ ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಬೂಸ್ಟರ್‌ ಡೋಸ್‌ ಅನ್ನು ಉಚಿತವಾಗಿ ನೀಡಲಾಗುವುದು. ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಹಣ ಪಾವತಿಸಿ ಲಸಿಕೆ ಪಡೆಯುವುದನ್ನು ಮುಂದುವರಿಸಲಾಗುವುದು ಎಂದು ಅಧಿಕೃತ ಆದೇಶ ತಿಳಿಸಿದೆ.

ಆರೋಗ್ಯ ಕಾರ್ಯಕರ್ತರಿಗೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್‌ಅನ್ನು ದೆಹಲಿಯಲ್ಲಿ ಈಗಾಗಲೇ ಉಚಿತವಾಗಿ ನೀಡಲಾಗುತ್ತಿದೆ.

ADVERTISEMENT

ಮುನ್ನೆಚ್ಚರಿಕೆ ಡೋಸ್‌ಗಳನ್ನು ಸದ್ಯ ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದ್ದು, ಕೋವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ₹ 225ಗೆ ಲಭ್ಯವಾಗುತ್ತಿದೆ. ಖಾಸಗಿ ಲಸಿಕಾ ಕೇಂದ್ರ ಅಥವಾ ಆಸ್ಪತ್ರೆಗಳ ಸೇವಾ ಶುಲ್ಕ ₹150ನ್ನು ಪ್ರತ್ಯೇಕವಾಗಿ ಪಾವತಿಸಬೇಕು.

ದೆಹಲಿಯಲ್ಲಿ ಕೋವಿಡ್‌ ಪ್ರಕರಣಗ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.