ADVERTISEMENT

ಕಾಲೇಜು ವಿದ್ಯಾರ್ಥಿಗಳಿಗೆ ಆಂಧ್ರ ಸರ್ಕಾರದಿಂದ ಉಚಿತ JEE, NEET ತರಬೇತಿ

ಪಿಟಿಐ
Published 15 ಜೂನ್ 2025, 10:26 IST
Last Updated 15 ಜೂನ್ 2025, 10:26 IST
<div class="paragraphs"><p>ಎಐ ಚಿತ್ರ</p></div>

ಎಐ ಚಿತ್ರ

   

ಅಮರಾವತಿ: ಸರ್ಕಾರಿ ಜೂನಿಯರ್‌ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಜೆಇಇ ಮತ್ತು ನೀಟ್‌ ತರಬೇತಿ ನೀಡುವ ರಾಜ್ಯವ್ಯಾಪಿ ಉಪಕ್ರಮಕ್ಕೆ ಆಂಧ್ರ ಪ್ರದೇಶದ ಮಾನವ ಸಂಪನ್ಮೂಲ ಸಚಿವ ನಾರಾ ಲೋಕೇಶ್‌ ಭಾನುವಾರ ಚಾಲನೆ ನೀಡಿದರು.

1335 ಸರ್ಕಾರಿ ಜೂನಿಯರ್ ಕಾಲೇಜಿನ ಸುಮಾರು 1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದು ಉಪಯುಕ್ತವಾಲಿದೆ ಎಂದು ಸರ್ಕಾರ ತಿಳಿಸಿದೆ. ರಾಷ್ಟ್ರಮಟ್ಟದ ಪರೀಕ್ಷೆಗಳಿಗೆ ತಯಾರಾಗಲು ವಿದ್ಯಾರ್ಥಿಗಳಿಗೆ ಪರಿಣಿತ ಅಧ್ಯಾಪಕರು ಸಹಾಯ ಮಾಡಲಿದ್ದಾರೆ ಎಂದು ಹೇಳಿದೆ.

ADVERTISEMENT

ಈ ಉಪಕ್ರಮವು ಪ್ರತಿಯೊಬ್ಬ ವಿದ್ಯಾರ್ಥಿಗೆ ದೊಡ್ಡ ಕನಸನ್ನು ಕಾಣಲು ಮತ್ತು ಅದನ್ನು ನನಸಾಗಿಸಲು ನ್ಯಾಯಯುತವಾದ ಅವಕಾಶ ನೀಡುತ್ತದೆ ಎಂದು ನಾರಾ ಲೋಕೇಶ್‌ ಅವರು ತಿಳಿಸಿದ್ದಾರೆ.

‘ದೇಶದಲ್ಲಿ ಮೊದಲ ಬಾರಿಗೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಜೆಇಇ ಮತ್ತು ನೀಟ್‌ ತರಬೇತಿ ನೀಡಲಾಗುತ್ತಿದೆ. ಇದು ಆರ್ಥಿಕವಾಗಿ ದುರ್ಬಲ ಸಮುದಾಯಗಳಿಂದ ಬಂದ ವಿದ್ಯಾರ್ಥಿಗಳಿಗೆ ಇತರ ವಿದ್ಯಾರ್ಥಿಗಳೊಂದಿಗೆ ಸಮಾನವಾಗಿ ಸ್ಪರ್ಧಿಸಲು ಸಹಾಯ ಮಾಡುತ್ತದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.