ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ
ನವದೆಹಲಿ : ಬಹು ನಿರೀಕ್ಷೆಯ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಎರಡು ದಶಕಗಳಿಂದ ನಡೆಯುತ್ತಿದ್ದ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ. ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳ ಮಾರುಕಟ್ಟೆ ಪ್ರವೇಶಕ್ಕೆ ಈ ಒಪ್ಪಂದ ಅನುವು ಮಾಡಿಕೊಟ್ಟಿದೆ.
ಐರೋಪ್ಯ ಕೌನ್ಸಿಲ್ ಮುಖ್ಯಸ್ಥ ಆಂಟೋನಿಯೋ ಕೋಸ್ಟಾ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮಧ್ಯಾಹ್ನ ಈ ಒಪ್ಪಂದಕ್ಕೆ ಸಹಿ ಹಾಕಿದರು.
ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (ಎಫ್‌ಟಿಎ) ಜಾರಿಗೆ ಬಂದ ನಂತರದಲ್ಲಿ ಯುರೋಪಿನ ಕಾರುಗಳು, ವೈನ್‌ನಂತಹ ಉತ್ಪನ್ನಗಳ ಬೆಲೆಯು ಭಾರತದ ಮಾರುಕಟ್ಟೆಯಲ್ಲಿ ಇಳಿಕೆಯಾಗಲಿವೆ.
ಸೇವಾ ವಲಯಗಳಿಗೆ ಸಂಬಂಧಿಸಿದ ಹಲವು ನಿಯಮಗಳಲ್ಲಿ ಸಡಿಲಿಕೆ ಇರಲಿದೆ. ಭಾರತದ ತನ್ನ ಜವಳಿ, ಚರ್ಮೋದ್ಯಮ, ವಸ್ತ್ರ, ಆಭರಣ ಮತ್ತು ಹರಳು, ಕರಕುಶಲ ಉತ್ಪನ್ನಗಳಿಗೆ ಯುರೋಪಿನ ಮಾರುಕಟ್ಟೆಗೆ ಸುಂಕರಹಿತವಾಗಿ ಪ್ರವೇಶಿಸಲಿವೆ.
ಭಾರತವು ಬ್ರಿಟನ್ ಜೊತೆ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದದಲ್ಲಿ, ವಾಹನ ವಲಯಕ್ಕೆ ಕೋಟಾ ಆಧಾರಿತ ಸುಂಕ ವಿನಾಯಿತಿ ನೀಡಿದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಜೊತೆಗಿನ ಒಪ್ಪಂದಗಳಲ್ಲಿ ವೈನ್‌ಗಳ ಬಗ್ಗೆ ಪ್ರಸ್ತಾಪ ಇದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.