ADVERTISEMENT

ಮಣಿಪುರಕ್ಕೆ ಭೇಟಿ ನೀಡದೆ ವಿದೇಶಗಳಿಗೆ ತೆರಳುವ ಪ್ರಧಾನಿ ಮೋದಿ ನಡೆಗೆ ‘ಕೈ’ ಕಿಡಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2024, 6:13 IST
Last Updated 21 ಡಿಸೆಂಬರ್ 2024, 6:13 IST
<div class="paragraphs"><p>ಜೈರಾಮ್ ರಮೇಶ್</p></div>

ಜೈರಾಮ್ ರಮೇಶ್

   

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಸಮಯವಿಲ್ಲದ ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್‌ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಬೇಕೆಂದು ಕಾಂಗ್ರೆಸ್‌ ಈಗಾಗಲೇ ಅನೇಕ ಬಾರಿ ಆಗ್ರಹಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ವಿದೇಶ ಪ್ರಯಾಣ ಬೆಳೆಸುವ ಅವರಿಗೆ ಮಣಿಪುರ ಭೇಟಿಗೆ ಸಮಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ADVERTISEMENT

‘ಕಲಹ ಪೀಡಿತ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಹಾಗೂ ಸಹಜ ಸ್ಥಿತಿಗೆ ಮರಳಿಸುವ ಪ್ರಯತ್ನ ಮಾಡಬೇಕಿದೆ ಎಂದು ಜೈರಾಮ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೈತ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಕ್ಷೇತ್ರ ಮತ್ತು ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆದ ಜನಾಂಗೀಯ ಹಿಂಸಾಚಾರದಿಂದಾಗಿ ಈವರೆಗೆ 220ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.