ನವದೆಹಲಿ: ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 62 ಸಿಬ್ಬಂದಿಯಲ್ಲಿ ಶನಿವಾರ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಇದರೊಂದಿಗೆ ಸಿಆರ್‌ಪಿಎಫ್‌ನಲ್ಲಿ ಸೋಂಕಿತರ ಸಂಖ್ಯೆ 231ಕ್ಕೆ ಏರಿಕೆಯಾಗಿದೆ. ದೆಹಲಿ ಘಟಕದ ‘194 ತುರ್ತು ಕಾರ್ಯಪಡೆ’ ಸಿಬ್ಬಂದಿಯಲ್ಲಿ ಇಂದು ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 3.25 ಲಕ್ಷ ಸಿಬ್ಬಂದಿ ಒಳಗೊಂಡಿರುವ ಸಿಆರ್‌ಪಿಎಫ್‌ನಲ್ಲಿ ಈವರೆಗೆ ಕೊರೊನಾದಿಂದಾಗಿ ಒಬ್ಬರು ಮೃತಪಟ್ಟಿದ್ದು, ಒಬ್ಬರು ಗುಣಮುಖರಾಗಿದ್ದಾರೆ. 55 ವರ್ಷ ವುಯಸ್ಸಿನ ಅಧಿಕಾರಿಯೊಬ್ಬರು ಕಳೆದ ತಿಂಗಳು ಮೃತಪಟ್ಟಿದ್ದರು.
ಇದನ್ನೂ ಓದಿ:ಕೊರೊನಾ ಪರೀಕ್ಷಾ ಸಾಮರ್ಥ್ಯ ದಿನಕ್ಕೆ 95 ಸಾವಿರಕ್ಕೆ ಹೆಚ್ಚಿಸಲಾಗಿದೆ: ಹರ್ಷವರ್ಧನ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.