ಇಂಫಾಲ: ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಗುರುವಾರ ಮತ್ತೆ ಹಿಂಸಾಚಾರ ಮರುಕಳಿಸಿದ್ದು ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜತೆಗೆ ಹಲವು ಸುತ್ತು ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೀತೆಲ್ಮನಬಿ ಎನ್ನುವ ಪ್ರದೇಶದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ದಾಳಿ ನಡೆದ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 3 ರಂದು ಮೈತೇಯಿ ಮತ್ತು ಕುಕಿ ಜನಾಂಗಗಳ ಮಧ್ಯೆ ಆರಂಭವಾದ ಸಂಘರ್ಷದಲ್ಲಿ ಈವರೆಗೆ 180ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.