ಗೋರಖ್‌ಪುರ: ಉತ್ತಮ ಮಳೆಯಾಗುವಂತೆ ಕೋರಿಕೆ ಸಲ್ಲಿಸಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಜೋಡಿ ಕಪ್ಪೆಗಳಿಗೆ ಮದುವೆ ಮಾಡಿಸಲಾಗಿದೆ.
ಹಿಂದೂ ಮಹಾಸಭಾ ಸಂಘಟನೆಯು ಮದುವೆಯ ಎಲ್ಲ ಕಾರ್ಯಗಳನ್ನು ನಿರ್ವಹಿಸಿದೆ. ಗೋರಖ್‌ಪುರದ ಕಾಳಿಬರಿ ದೇವಸ್ಥಾನದಲ್ಲಿ ಮದುವೆ ನಡೆದಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಈ ಪ್ರದೇಶದಲ್ಲಿ ಬರಪೀಡಿತ ಸನ್ನಿವೇಶವಿದೆ. ಮಳೆಗಾಲವಾದರೂ, ಸಾಕಷ್ಟು ಮಳೆ ಸುರಿದಿಲ್ಲ. ಹೀಗಾಗಿ ಕಪ್ಪೆಗಳಿಗೆ ಮದುವೆ ಮಾಡಿಸಲಾಗಿದೆ ಎಂದು ಹಿಂದೂ ಮಹಾಸಭಾದ ರಮಾಕಾಂತ್ ವರ್ಮಾ ತಿಳಿಸಿದ್ದಾರೆ.
ಮಳೆಗಾಲದಲ್ಲಿ ಮಳೆಯಾಗದೇ ಇದ್ದರೆ, ಕಪ್ಪೆಗಳಿಗೆ ಮದುವೆ ಮಾಡಿಸುವ ಸಂಪ್ರದಾಯವಿದೆ. ಅದರಂತೆ, ಉತ್ತರ ಪ್ರದೇಶದಲ್ಲಿ ಕಪ್ಪೆಗಳ ಮದುವೆ ಕಾರ್ಯಕ್ರಮ ನಡೆಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.