ADVERTISEMENT

ಫೆ. 13ರಿಂದ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ವರದಿ ಬೇಡ

ಪಿಟಿಐ
Published 10 ಫೆಬ್ರುವರಿ 2023, 13:57 IST
Last Updated 10 ಫೆಬ್ರುವರಿ 2023, 13:57 IST
ಸಂಗ್ರಹ ಚಿತ್ರ 
ಸಂಗ್ರಹ ಚಿತ್ರ    

ನವದೆಹಲಿ: ಚೀನಾ, ಹಾಂಗ್‌ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಪುರ, ಥಾಯ್ಲೆಂಡ್‌ಗಳಿಂದ ಭಾರತಕ್ಕೆ ಬರುವ ಪ್ರವಾಸಿಗರು ಇನ್ನು ಮುಂದೆ ಕೋವಿಡ್ ತಪಾಸಣೆಯ ವರದಿಯನ್ನು ಸಲ್ಲಿಸುವ ಅಗತ್ಯವಿಲ್ಲ. ಬದಲಿಗೆ ಫೆ. 13ರಿಂದ ಸ್ವಯಂಘೋಷಿತ ಆರೋಗ್ಯ ಪ್ರಮಾಣಪತ್ರವನ್ನು ‘ಏರ್ ಸುವಿಧಾ’ ಪೋರ್ಟಲ್‌ನಲ್ಲಿ ಸಲ್ಲಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

‘ನಾಲ್ಕು ವಾರಗಳ ಅವಧಿಯಲ್ಲಿ ಈ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದೆ’ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT