ADVERTISEMENT

ಖಿನ್ನತೆ: ತೆಲುಗು ನಟಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2019, 18:47 IST
Last Updated 6 ಫೆಬ್ರುವರಿ 2019, 18:47 IST
Naga Jhansi
Naga Jhansi   

ಹೈದರಾಬಾದ್‌: ಖಿನ್ನತೆಗೊಳಗಾಗಿದ್ದ ಧಾರಾವಾಹಿ ನಟಿಯೊಬ್ಬರು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೆಲುಗು ಧಾರಾವಾಹಿಯೊಂದರಲ್ಲಿ ನಾಯಕಿ ಪಾತ್ರ ಮಾಡುತ್ತಿದ್ದ ನಾಗಾ ಝಾನ್ಸಿ (21) ನಾಗಾರ್ಜುನಪುರದ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೂರ್ಯ ಎಂಬುವರನ್ನು ಪ್ರೀತಿಸುತ್ತಿದ್ದ ನಾಗಾ, ಅವರು ದೂರವಾದ ಮೇಲೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಕಾರಣದಿಂದಲೇ ಸಾವಿಗೆ ಶರಣಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.