ADVERTISEMENT

ಮೊಟ್ಟೆ ಕ್ಯಾನ್ಸರ್‌ಕಾರಕ ಅಲ್ಲ; ಕೇಂದ್ರ ಆಹಾರ ಗುಣಮಟ್ಟ ಪ್ರಾಧಿಕಾರದ ದೃಢೀಕರಣ

ಪಿಟಿಐ
Published 20 ಡಿಸೆಂಬರ್ 2025, 13:03 IST
Last Updated 20 ಡಿಸೆಂಬರ್ 2025, 13:03 IST
ಕೋಳಿ ಮೊಟ್ಟೆ
ಕೋಳಿ ಮೊಟ್ಟೆ   

ನವದೆಹಲಿ: ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಶನಿವಾರ ಹೇಳಿದೆ.

ದೇಶದಲ್ಲಿರುವ ಮೊಟ್ಟೆಗಳು ಮಾನವನ ಸೇವೆನೆಗೆ ಸುರಕ್ಷಿತವಾಗಿವೆ. ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಕವಾಗುವ ಅಂಶಗಳಿವೆ ಎಂದು ಆರೋಪಿಸುವ ವರದಿಗಳು ವೈಜ್ಞಾನಿಕ ಆಧಾರವನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ವರದಿಗಳು ಜನರನ್ನು ತಪ್ಪು ದಾರಿಗೆ ಎಳೆಯುವುದಲ್ಲದೆ,‌ ಅನಗತ್ಯವಾಗಿ ಆತಂಕವನ್ನು ಸೃಷ್ಟಿ ಮಾಡಿದೆ ಎಂದು ಹೇಳಿದೆ. 

ADVERTISEMENT

ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಮೆಟಾಬಾಲೈಟ್‌ ಅಂಶ ಪತ್ತೆಯಾಗಿದೆ. ಇದು ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವರದಿಗಳು ಹರಿದಾಡಿದ್ದವು. ಇದಕ್ಕೆ ಸ್ಪಷ್ಟೀಕರಣ ನೀಡಿದ ಎಫ್‌ಎಸ್‌ಎಸ್‌ಎಐ, ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಕಾರ, ಕೋಳಿ ಸಾಕಾಣಿಕೆ ಮತ್ತು ಮೊಟ್ಟೆ ಉತ್ಪಾದನೆಯ ಎಲ್ಲ ಹಂತದಲ್ಲಿ ನೈಟ್ರೋಫ್ಯೂರಾನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ. 

ಯಾವುದೇ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಆರೋಗ್ಯ ಸಂಸ್ಥೆಯು ಮೊಟ್ಟೆ ಸೇವನೆಯು ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ಹೇಳಿಲ್ಲ ಎಂದು ಎಫ್‌ಎಸ್‌ಎಸ್‌ಎಐ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.