ADVERTISEMENT

ಪ್ರಶಾಂತ್‌ ಭೂಷಣ್‌ ನ್ಯಾಯಾಂಗ ನಿಂದನೆ ಪ್ರಕರಣ: ಸುಪ್ರಿಂನಿಂದ ಇನ್ನಷ್ಟು ವಿಚಾರಣೆ

ಪಿಟಿಐ
Published 10 ಆಗಸ್ಟ್ 2020, 17:41 IST
Last Updated 10 ಆಗಸ್ಟ್ 2020, 17:41 IST
   

ನವದೆಹಲಿ: ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯನ್ಯಾಯಮೂರ್ತಿಗಳ (ಸಿಜೆಐ) ಭ್ರಷ್ಟಾಚಾರ ಆರೋಪ ವಿಚಾರದಲ್ಲಿ ವಕೀಲ ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಮುಂದುವರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧರಿಸಿದೆ.

‘ಭ್ರಷ್ಟಾಚಾರ’ಕ್ಕೆ ಸಂಬಂಧಿಸಿದ ಹೇಳಿಕೆ ಬಗ್ಗೆ ಯಾವುದೇ ನಿರ್ಧಾರಕ್ಕೆ ಬರುವ ಮೊದಲು, ಈ ವಿಷಯವನ್ನು ವಿಚಾರಣೆಗೆ ಒಳಪಡಿಸಬೇಕಾದ ಅಗತ್ಯವಿದೆ’ ಎಂದು ಮೂವರು ನ್ಯಾಯಮೂರ್ತಿಗಳ ಪೀಠ ಹೇಳಿತು. ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರು ಇದ್ದಾರೆ.

2009ರಲ್ಲಿ ತೆಹಲ್ಕಾ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್ ಭೂಷಣ್ ಅವರು ಎಂಟು ಮಾಜಿ ಮುಖ್ಯನ್ಯಾಯಮೂರ್ತಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಭೂಷಣ್ ಅವರ ವಿವರಣೆಯನ್ನು ಕೋರ್ಟ್ ತಿರಸ್ಕರಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.