ರಿಷಿ ಸುನಕ್ ಹಾಗೂ ನರೇಂದ್ರ ಮೋದಿ
(ಪಿಟಿಐ ಚಿತ್ರ)
ನವದೆಹಲಿ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಭಾರತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಾತುಕತೆ ನಡೆಸಿದ್ದಾರೆ.
ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಭಾರತಕ್ಕೆ ಆಗಮಿಸಿದ್ದಾರೆ. ಈ ನಡುವೆ ಉಭಯ ದೇಶಗಳ ನಾಯಕರ ನಡುವೆ ದ್ವಿಪಕ್ಷೀಯ ಸಭೆ ನಡೆಯಿತು.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, ವ್ಯಾಪಾರ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು ಮತ್ತು ಹೂಡಿಕೆಯನ್ನುಉತ್ತೇಜಿಸುವ ಕುರಿತು ಚರ್ಚೆ ನಡೆಸಿದ್ದೇವೆ. ಭಾರತ ಹಾಗೂ ಬ್ರಿಟನ್ ಸಮೃದ್ಧ ಮತ್ತು ಜಾಗತಿಕ ಸುಸ್ಥಿರ ಅಭಿವೃದ್ಧಿವಾಗಿ ಕೆಲಸ ಮಾಡಲಿವೆ ಎಂದು ಹೇಳಿದ್ದಾರೆ.
ಈ ಮೊದಲು ಭಾರತಕ್ಕೆ ಆಗಮಿಸಲು ಖುಷಿಯಾಗುತ್ತಿದೆ ಎಂದು ರಿಷಿ ಸುನಕ್ ಹೇಳಿದ್ದರು. ನನ್ನ ಮೂಲ ಭಾರತವಾಗಿದ್ದು, ಈ ಬಗ್ಗೆ ಹೆಮ್ಮೆ ಇದೆ ಎಂದು ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.