ADVERTISEMENT

G20 Summit: ಮೋದಿ, ಬೈಡನ್‌ ಸೇರಿ ರಾಜ್‌ಘಾಟ್‌ಗೆ ಭೇಟಿ ನೀಡಿದ ಜಿ20 ನಾಯಕರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಸೆಪ್ಟೆಂಬರ್ 2023, 6:43 IST
Last Updated 10 ಸೆಪ್ಟೆಂಬರ್ 2023, 6:43 IST
<div class="paragraphs"><p>ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಹಾಗೂ ಜಿ20 ನಾಯಕರು.</p></div>

ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಹಾಗೂ ಜಿ20 ನಾಯಕರು.

   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಸೇರಿದಂತೆ ಜಿ20 ನಾಯಕರು ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿದ್ದು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದ್ದಾರೆ.

ರಾಜ್‌ಘಾಟ್‌ ಆವರಣಕ್ಕೆ ಪ್ರವೇಶಿಸಿದ ಅಧ್ಯಕ್ಷ ಜೋ ಬೈಡನ್‌ ಅವರನ್ನು ಪ್ರಧಾನಿ ಮೋದಿ ಬರಮಾಡಿಕೊಂಡಿದ್ದು, ಅವರಿಗೆ ಖಾದಿ ಉಡುಗೊರೆಯನ್ನು ನೀಡಿದ್ದಾರೆ.

ADVERTISEMENT

ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌, ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೋಡೋ, ದಕ್ಷಿಣ ಆಫ್ರಿಕಾದ ಅಧ್ಯ‌ಕ್ಷ ಸಿರಿಲ್‌ ರಾಮಫೋಸಾ, ಓಮನ್ ಉಪಪ್ರಧಾನಿ ಅಸಾದ್ ಬಿನ್ ತಾರಿಕ್ ಬಿನ್ ತೈಮೂರ್ ಅಲ್ ಸೈದ್, ಸಿಂಗಪುರದ ಪ್ರಧಾನಿ ಲೀ ಸೀನ್ ಲೂಂಗ್ ಹಾಗೂ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಸೇರಿದಂತೆ ಇತರ ನಾಯಕರು ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಇದಲ್ಲದೆ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್‌, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ವಿಶ್ವಬ್ಯಾಂಕ್ ಮುಖ್ಯಸ್ಥ ಅಜಯ್ ಬಾಂಗಾ, ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಅಧ್ಯಕ್ಷೆ ಕ್ರಿಸ್ಟಲಿನಾ ಜಾರ್ಜಿಯೆವಾ ಮತ್ತು ಇತರ ಪ್ರತಿನಿಧಿಗಳು ಕೂಡ ಗೌರವ ಸಲ್ಲಿಸಲು ರಾಜ್‌ಘಾಟ್‌ಗೆ ಆಗಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.