ADVERTISEMENT

ಮಹಾತ್ಮ ಗಾಂಧಿ 150ನೇ ಜನ್ಮದಿನ:ಗಾಂಧಿ ಕನಸನ್ನು ಸಾಕಾರಗೊಳಿಸೋಣ– ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2019, 5:39 IST
Last Updated 2 ಅಕ್ಟೋಬರ್ 2019, 5:39 IST
ಪ್ರಧಾನಿ ನರೇಂದ್ರ ಮೋದಿ ರಾಜ್‌ ಘಾಟ್‌ನಲ್ಲಿ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದರು
ಪ್ರಧಾನಿ ನರೇಂದ್ರ ಮೋದಿ ರಾಜ್‌ ಘಾಟ್‌ನಲ್ಲಿ ಗಾಂಧೀಜಿ ಸ್ಮಾರಕಕ್ಕೆ ನಮನ ಸಲ್ಲಿಸಿದರು   

ನವದೆಹಲಿ: ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150ನೇ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ 115ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧೀ ಸ್ಮಾರಕ ರಾಜ್‌ ಘಾಟ್‌ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಸ್ಮಾರಕ ವಿಜಯ್ ಘಾಟ್‌ಗೆ ತೆರಳಿ ನಮನ ಸಲ್ಲಿಸಿದರು.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಮಗ ಇಬ್ಬರು ಮಹತ್ಮರಿಗೆ ನಮನ ಸಲ್ಲಿಸಿದರು.

ADVERTISEMENT

ಪ್ರಧಾನಿ ಕಾರ್ಯಕ್ರಮ :ರಾಜ್‌ಘಾಟ್‌ ಹಾಗೂ ವಿಜಯ್‌ ಘಾಟ್‌ನಲ್ಲಿ ನಮನ ಸಲ್ಲಿಸಿದ ನಂತರ ನೇರವಾಗಿ ಸಂಸತ್ತಿಗೆ ತೆರಳಲಿರುವ ಮೋದಿ ಅವರು ಅಲ್ಲಿನ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ.ಸಂಜೆಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿರುವ ಪ್ರಧಾನಿ ಅಲ್ಲಿ ನಡೆಯುವ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಹಮ್ಮಿಕೊಂಡಿರುವಪಕ್ಷದ ‘ಗಾಂಧಿ ಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಲಿದ್ದಾರೆ.ದೆಹಲಿಯಲ್ಲಿನ ಕಾಂಗ್ರೆಸ್‌ ಕಚೇರಿಯಿಂದ ಶುರವಾಗುವ ಗಾಂಧಿ ಸಂದೇಶ ಪಾದಯಾತ್ರೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ಚಾಲನೆ ನೀಡಲಿದ್ದಾರೆ.

ಟ್ವೀಟ್‌ನಲ್ಲಿ ಗಾಂಧಿ ಜಯಂತಿಗೆ ಶುಭಕೋರಿಪ್ರಧಾನಿ ಮೋದಿ,‘ಗಾಂಧೀಜಿಮಾನವೀಯತೆಗೆ ಅಮೂಲ್ಯಕೊಡುಗೆಗಳನ್ನು ನೀಡಿದ್ದಾರೆ. ಅದಕ್ಕೆನಮ್ಮ ಕೃತಜ್ಞತೆಗಳು. ಅವರ ಕನಸನ್ನು ಸಾಕಾರಗೊಳಿಸಲು ಮತ್ತು ಉತ್ತಮ ಸಮಾಜ ನಿರ್ಮಾಣಕ್ಕೆ ಪಣತೊಟ್ಟು ಅದರ ಕಡೆಗೆ ಕೆಲಸ ಮಾಡೋಣ’ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.