ADVERTISEMENT

ತನಿಖಾ ಸಮಿತಿ ಕಾರ್ಯದರ್ಶಿಯಾಗಿ ಗಣೇಶ್ ಭಟ್‌

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 13:23 IST
Last Updated 6 ಸೆಪ್ಟೆಂಬರ್ 2025, 13:23 IST
ಗಣೇಶ್ ಭಟ್‌
ಗಣೇಶ್ ಭಟ್‌   

ನವದೆಹಲಿ: ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ಕುರಿತ ತನಿಖಾ ಸಮಿತಿಯ ಕಾರ್ಯದರ್ಶಿಯಾಗಿ ಕರ್ನಾಟಕದ ನಿವೃತ್ತ ಐಆರ್‌ಎಸ್‌ ಅಧಿಕಾರಿ ಗಣೇಶ್ ಭಟ್‌ ನೇಮಕವಾಗಿದ್ದಾರೆ. 

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಗಣೇಶ್ ಭಟ್‌ ಅವರನ್ನು ಮೂವರು ಸದಸ್ಯರ ತನಿಖಾ ಸಮಿತಿಯ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ಕರ್ನಾಟಕದ ಹಿರಿಯ ವಕೀಲ ಬಿ.ವಿ.ಆಚಾರ್ಯ ಈ ಸಮಿತಿಯ ಸದಸ್ಯರಾಗಿದ್ದಾರೆ. 

ಗಣಪತಿ ಭಟ್‌ ಅವರು ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯ ಕರ್ನಾಟಕ ಮತ್ತು ಗೋವಾ ಪ್ರಾದೇಶಿಕ ಪ್ರಧಾನ ಮುಖ್ಯ ಆಯುಕ್ತ ಸ್ಥಾನದಿಂದ ನಿವೃತ್ತರಾಗಿದ್ದಾರೆ. ಇದಕ್ಕೂ ಮುನ್ನ ಅವರು ನವದೆಹಲಿಯಲ್ಲಿ ಅಂತರರಾಷ್ಟ್ರೀಯ ತೆರಿಗೆ ವಿಭಾಗದ ಪ್ರಧಾನ ಮುಖ್ಯ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.