ನವದೆಹಲಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಗಣೇಶ ಚತುರ್ಥಿಯಂದು ನಾಡಿನ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಮಂಗಳಮೂರ್ತಿ ಗಣಪನು ಜ್ಞಾನ, ಸಾಧನೆ ಮತ್ತು ಅದೃಷ್ಟದ ಸಂಕೇತವಾಗಿದೆ. ಗಣೇಶನ ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಹರಡಲಿ ಎಂದು ನಾನು ಹಾರೈಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.
ಗಣೇಶ ಚತುರ್ಥಿಯ ಹಬ್ಬದ ಶುಭಾಶಯಗಳು. ಗಣೇಶ ದೇವರ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಕೋರಿದ್ದಾರೆ. ವಿಘ್ನ ನಿವಾರಕ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ನಾಡಿನಲ್ಲಿ ಜನತೆ ಸುಖ, ಶಾಂತಿ, ಸಮೃದ್ಧಿಯಿಂದ ನೆಲೆಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.