ADVERTISEMENT

ಸಾಮೂಹಿಕ ಅತ್ಯಾಚಾರ ಆರೋಪ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 14:49 IST
Last Updated 7 ಫೆಬ್ರುವರಿ 2026, 14:49 IST
...
...   

ಸಂತ ಕಬೀರ ನಗರ (ಉತ್ತರ ಪ್ರದೇಶ) (ಪಿಟಿಐ): ಇಲ್ಲಿನ ಮಹುಲಿ ಎಂಬ ನಗರದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕೃಷಿ ಸಂಬಂಧಿತ ಕೆಲಸಗಳಿಗಾಗಿ ಬಾಲಕಿ ಗುರುವಾರ ಜಮೀನಿಗೆ ತೆರಳಿದ್ದ ವೇಳೆ ಇಬ್ಬರು ಪುರುಷರು ಆಕೆಯನ್ನು ಚುಡಾಯಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ಶುಕ್ರವಾರ ದೂರು ನೀಡಿದ್ದರು ಎಂದೂ ಪೊಲೀಸರು ತಿಳಿಸಿದ್ದಾರೆ.

ದೂರು ಆಧರಿಸಿ ಆರೋಪಿಗಳಾದ ಅಮನ್‌ ಕುಮಾರ್ (19) ಹಾಗೂ ಹಿಮೇಶ್‌ ಕುಮಾರ್‌ (19) ಎಂಬವರನ್ನು ಬಂಧಿಸಲಾಗಿದೆ. ಬಂಧಿತರು ಬಂಧುಪುರ ಗ್ರಾಮದ ನಿವಾಸಿಗಳಾಗಿದ್ದು, ಅವರ ವಿರುದ್ಧ ಪೋಕ್ಸೋ ಹಾಗೂ ಬಿಎನ್‌ಎಸ್ ಕಾಯ್ದೆ ಅನ್ವಯ ‍ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.