ADVERTISEMENT

ಉದ್ಯೋಗ ಸಿಗುತ್ತೆ ಎಂದು ಭರವಸೆಯಿಂದ ಹೋದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪಿಟಿಐ
Published 17 ಡಿಸೆಂಬರ್ 2025, 5:53 IST
Last Updated 17 ಡಿಸೆಂಬರ್ 2025, 5:53 IST
   

ಮುಂಬೈ: ಉದ್ಯೋಗದ ಆಮಿಷಯೊಡ್ಡಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಒಬ್ಬ ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಂಬಾಜೋಗೈ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಗೆ ಕಲಾ ಕೇಂದ್ರದಲ್ಲಿ ಉದ್ಯೋಗ ಕೊಡಿಸುವುದಾಗಿ ಆಮಿಷಯೊಡ್ಡಿದ್ದ ಮಹಿಳೆ ಸೇರಿದಂತೆ ಇಬ್ಬರು ವ್ಯಕ್ತಿಗಳು ಆಕೆಯ ಮೇಲೆ ಹಲ್ಲೆ ನಡೆಸಿ ಲಾಡ್ಜ್‌ವೊಂದಕ್ಕೆ ಬಲವಂತವಾಗಿ ಕರೆದೊಯ್ದರು. ಅಲ್ಲಿ ಆಕೆಯ ಮೇಲೆ ಮೂವರು ಪುರುಷರು ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಸಂತ್ರಸ್ತೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುವ ಪ್ರಯತ್ನಗಳು ನಡೆದಿವೆ. ಈ ನಡುವೆ ಸಂತ್ರಸ್ತೆ ತನ್ನ ತಾಯಿಯನ್ನು ಸಂಪರ್ಕಿಸಿದ್ದಾರೆ. ಆಕೆಯ ತಾಯಿ ಅಂಬಾಜೋಗೈಗೆ ಧಾವಿಸಿ, ತನ್ನ ಮಗಳನ್ನು ರಕ್ಷಿಸಿ ಬಾರಾಮತಿಗೆ ಕರೆದೊಯ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾರಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಅಂಬಾಜೋಗೈ ಗ್ರಾಮೀಣ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.