ಸಾಂದರ್ಭಿಕ ಚಿತ್ರ
ಗೋಂಡಾ: ಉತ್ತರ ಪ್ರದೇಶದ ಗೋಂಡಾದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ದರೋಡೆಕೋರ ಸೋನು ಪಾಸಿ ಹತ್ಯೆಯಾಗಿದ್ದಾನೆ. ಕೊಲೆ, ಸುಲಿಗೆ, ದರೋಡೆ ಸೇರಿದಂತೆ 53 ಪ್ರಕರಣಗಳಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋನು ಪಾಸಿ ಅಲಿಯಾಸ್ ಭೂರೆ ಸೊನೌಲಿ ಮಹಮ್ಮದ್ ಪುರ ಬಾಂಧಾ ಬಳಿ ಇರುವ ಮಾಹಿತಿ ಆಧರಿಸಿ ವಿಶೇಷ ಕಾರ್ಯಾಚರಣೆ ತಂಡ ಮತ್ತು ಖೋದರೆ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು. ಅಧಿಕಾರಿ ಮೇಲೆ ಗುಂಡು ಹಾರಿಸಿ ಪಾಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಎನ್‌ಕೌಂಟರ್ ಮಾಡಿದರು ಎಂದು ಗೋಂಡಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ.
ಪಾಸಿಯಿಂದ 32 ಪಿಸ್ತೂಲು, 315 ದೇಸಿ ಬಂದೂಕುಗಳು ಮತ್ತು ಸಿಡಿಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಗುಂಡು ನಿರೋಧಕ ಕವಚ ಧರಿಸಿದ್ದ ಅಧಿಕಾರಿಗೆ ಪಾಸಿ ಹಾರಿಸಿದ ಒಂದು ಗುಂಡು ತಗುಲಿದ್ದು ಅವರಿಗೆ ಯಾವುದೇ ಗಾಯಗಳಾಗಿಲ್ಲ.
ಕಳೆದ ತಿಂಗಳು ಉಮ್ರಿ ಬೇಗಮ್‌ಗಂಜ್‌ನಲ್ಲಿ ಕಳ್ಳತನ ಮಾಡುತ್ತಿದ್ದ ವೇಳೆ ಹಿಡಿಯಲು ಬಂದ ಸ್ಥಳೀಯ ವ್ಯಕ್ತಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ಬಳಿಕ ಪರಾರಿಯಾಗಿದ್ದ. ತಲೆಮರೆಸಿಕೊಂಡಿದ್ದ ಈತನ ಬಗ್ಗೆ ಮಾಹಿತಿ ಕೊಟ್ಟವರಿಗೆ ₹1 ಲಕ್ಷ ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.