ADVERTISEMENT

ಪುಣೆ | ಗ್ಯಾಂಗ್‌ಸ್ಟರ್‌ ಶರದ್‌ ಮೊಹುಲ್‌ ಹತ್ಯೆ ಪ್ರಕರಣ: 8 ಮಂದಿ ಶಂಕಿತರ ಬಂಧನ

ಪಿಟಿಐ
Published 6 ಜನವರಿ 2024, 4:11 IST
Last Updated 6 ಜನವರಿ 2024, 4:11 IST
<div class="paragraphs"><p>ಬಂಧನ</p></div>

ಬಂಧನ

   

ಪುಣೆ: ಕುಖ್ಯಾತ ಗ್ಯಾಂಗ್‌ಸ್ಟರ್‌ ಶರದ್‌ ಮೊಹುಲ್‌ ಹತ್ಯೆಗೆ ಸಂಬಂಧಿಸಿದಂತೆ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆ–ಸತಾರಾ ರಸ್ತೆಯಲ್ಲಿ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದೆ. ಬಂಧಿತರಿಂದ ಮೂರು ಪಿಸ್ತೂಲ್‌ಗಳು, ಐದು ಗುಂಡುಗಳು ಸೇರಿದಂತೆ ಮೂರು ನಿಯತಕಾಲಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ಪುಣೆಯ ಖೊತ್ರೂಡ್‌ನ ಸುತಾರ್ದಾರ ಪ್ರದೇಶದಲ್ಲಿ ನಿನ್ನೆ (ಶುಕ್ರವಾರ) ಶರದ್‌ ಮೊಹುಲ್‌ ಮೇಲೆ ಆತನ ಗ್ಯಾಂಗ್‌ನಲ್ಲಿದ್ದ ಸಹಚರರೇ ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡಿದ್ದ ಶರದ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ ಒಂಬತ್ತು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಹಲವು ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪವನ್ನು ಶರದ್ ಎದುರಿಸುತ್ತಿದ್ದ. ಯರವಾಡ ಜೈಲಿನಲ್ಲಿ ಇಂಡಿಯನ್ ಮುಜಾಹಿದ್ದೀನ್ ಕಾರ್ಯಕರ್ತ ಎಂದು ಹೇಳಲಾಗಿದ್ದ ಮೊಹಮ್ಮದ್ ಖಾತೀಲ್ ಸಿದ್ಧಿಖಿ ಎಂಬುವವನ ಕೊಲೆ ಮಾಡಿದ್ದ ಆರೋಪ ಕೂಡ ಆತ ಎದುರಿಸುತ್ತಿದ್ದ.

ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರು, ಇದು ಗ್ಯಾಂಗ್ ವಾರ್ ಅಲ್ಲ. ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದು ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾಂಗ್‌ ವಾರ್‌ಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.