ಲಖನೌ: ಕಾನ್ಪುರದಲ್ಲಿ ಕೆಲ ದಿನಗಳ ಹಿಂದೆ ನಡೆದ ಎಂಟುಮಂದಿ ಪೊಲೀಸರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆ, ಹರಿಯಾಣದ ಫರೀದಾಬಾದ್‌ನ ಹೋಟೆಲ್ ಒಂದರಲ್ಲಿ ಕಾಣಿಸಿಕೊಂಡಿದ್ದಾನೆ. ಆದರೆ, ಪೊಲೀಸರು ಅಲ್ಲಿಗೆ ತಲುಪುವ ಮೊದಲೇ ಪರಾರಿಯಾಗಿದ್ದಾನೆ.
‘ಮಂಗಳವಾರ ರಾತ್ರಿ ಫರೀದಾಬಾದ್‌ನ ಹೋಟೆಲ್‌ಗೆ ಬಂದಿದ್ದ ದುಬೆ, ತನಗಾಗಿ ಒಂದು ಕೊಠಡಿ ಬುಕ್ ಮಾಡಲು ಮುಂದಾಗಿದ್ದ. ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿತ್ತು ಮತ್ತು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ ಪೊಲೀಸರು ಅಲ್ಲಿಗೆ ತಲುಪುವ ಮೊದಲೇ ಆತ ಪರಾರಿಯಾಗಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದೆಡೆ, ಉತ್ತರಪ್ರದೇಶ ಎಸ್‌ಟಿಎಫ್ ಹಾಗೂ ಕ್ರೈಂ ಬ್ರಾಂಚ್ ಪೊಲೀಸರು ಫರೀದಾಬಾದ್‌ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ವಿಕಾಸ್ ದುಬೆಯ ಸಮೀಪವರ್ತಿಗಳೆನಿಸಿಕೊಂಡ ಅಂಕುರ್, ಶ್ರವಣ್ ಹಾಗೂ ಕಾರ್ತಿಕೇಯ ಅಲಿಯಾಸ್ ಪ್ರಭಾತ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ನಾಲ್ಕು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳಲ್ಲಿ ಎರಡು ಪಿಸ್ತೂಲ್‌ಗಳು ಘಟನೆಯಲ್ಲಿ ಮೃತಪಟ್ಟಿದ್ದ ಪೊಲೀಸರ ಬಳಿ ಇದ್ದವುಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.