ADVERTISEMENT

ಗುಜರಾತ್| ಅನಿಲ ಸೋರಿಕೆ: ಉಸಿರಾಟ ಸಮಸ್ಯೆಯಿಂದಾಗಿ 28 ಮಂದಿ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಆಗಸ್ಟ್ 2023, 3:16 IST
Last Updated 24 ಆಗಸ್ಟ್ 2023, 3:16 IST
ಅನಿಲ ಸೋರಿಕೆ
ಅನಿಲ ಸೋರಿಕೆ    ಸಂಗ್ರಹ ಚಿತ್ರ

ಭರೂಚ್‌ (ಗುಜರಾತ್): ಜಿಲ್ಲೆಯ ಜಂಬುಸಾರ್‌ನಲ್ಲಿನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಉಸಿರಾಟದ ಸಮಸ್ಯೆಯಿಂದಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿನ ಪಿ.ಐ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಕಾರಣದಿಂದಾಗಿ ಬ್ರೋಮಿನ್‌ ಅನಿಲ ಸೋರಿಕೆ ಉಂಟಾಗಿದೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡಿರುವ ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌ಆರ್‌ ಚಾಂಧಲ್‌ ಬುಧವಾರ ಹೇಳಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಚಾಂಧಲ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.