ADVERTISEMENT

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಧುಲಿಯಾ, ಪಾರ್ದೀವಾಲಾ ಪ್ರಮಾಣ ವಚನ

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿಕೆ

ಪಿಟಿಐ
Published 9 ಮೇ 2022, 11:36 IST
Last Updated 9 ಮೇ 2022, 11:36 IST
ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಹೊಂದಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಜಮ್ಷಲ್ ಬಿ. ಪರ್ದಿವಾಲಾ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ ಬೋಧನೆ ಮಾಡಿದರು.                                                  -ಪಿಟಿಐ ಚಿತ್ರ
ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಹೊಂದಿದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಜಮ್ಷಲ್ ಬಿ. ಪರ್ದಿವಾಲಾ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ ಬೋಧನೆ ಮಾಡಿದರು.                                                  -ಪಿಟಿಐ ಚಿತ್ರ   

ನವದೆಹಲಿ(ಪಿಟಿಐ): ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸುಧಾಂಶು ಧೂಲಿಯಾ ಮತ್ತು ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಜಮ್‌ಶೆದ್‌ ಬಿ. ಪಾರ್ದೀವಾಲಾ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಇದರೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ಹುದ್ದೆಗಳು ಭರ್ತಿಯಾಗಿವೆ. ಈ ವರ್ಷದ ಜನವರಿ 4ರಂದು ನ್ಯಾ. ಆರ್. ಸುಭಾಷ್ ರೆಡ್ಡಿ ಅವರ ನಿವೃತ್ತಿಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಇಳಿದಿತ್ತು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು, ನ್ಯಾಯಮೂರ್ತಿಗಳಾದ ಧೂಲಿಯಾ ಹಾಗೂ ಪಾರ್ದೀವಾಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.