ADVERTISEMENT

ಕಾಂಗ್ರೆಸ್‌ನ ಶ್ರೀನಿವಾಸ್‌ಗೆ ಜಾಮೀನು ನಿರಾಕರಣೆ

ಪಿಟಿಐ
Published 5 ಮೇ 2023, 19:04 IST
Last Updated 5 ಮೇ 2023, 19:04 IST
ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಬಿ.ವಿ
ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಬಿ.ವಿ    ಪಿಟಿಐ

ಗುವಾಹಟಿ: ಅಸ್ಸಾಂ ಯುವ ಕಾಂಗ್ರೆಸ್‌ ಘಟಕ ಅಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆಯಾಗಿರುವ ಅಂಗ್‌ಕಿತಾ ದತ್ತ ಅವರು ದಾಖಲಿಸಿರುವ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿ ಅಜಿತ್‌ ಬೊರ್ತಾಕುರ್‌ ಅವರಿದ್ದ ‍ಪೀಠವು, ಅರ್ಜಿದಾರರಿಗೆ ಬಂಧನದಿಂದ ರಕ್ಷಣೆ ನೀಡಲು ಸೂಕ್ತವಾದ ಪ್ರಕರಣ ಇದಲ್ಲ. ಹಾಗಾಗಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದೆ.  

ಅಂಗ್‌ಕಿತಾ ದತ್ತ ಅವರು ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಶ್ರೀನಿವಾಸ್ ಏಪ್ರಿಲ್ 26ರಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ನಂತರ ಅವರು ಬಂಧನದಿಂದ ರಕ್ಷಣೆ ಕೋರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಶ್ರೀನಿವಾಸ್ ಕಳೆದ ಆರು ತಿಂಗಳಿಂದ ತಮಗೆ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಅಂಕಿತಾ ದತ್ತ ಅವರು  ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.