ಗುವಾಹಟಿ ಹೈಕೋರ್ಟ್
ಗುವಾಹಟಿ (ಅಸ್ಸಾಂ): ಗುವಾಹಟಿ ಹೈಕೋರ್ಟ್‌ಗೆ ಇಂದು (ಮಂಗಳವಾರ) ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಸಂದೇಶ ಬಂದ ತಕ್ಷಣ ನಾವು ಹೈಕೋರ್ಟ್‌ಗೆ ತಂಡವನ್ನು ರವಾನಿಸಿದ್ದೇವೆ. ನಮ್ಮ ತಜ್ಞರು ಆವರಣದ ಪ್ರತಿಯೊಂದು ಮೂಲೆಯನ್ನೂ ಪರಿಶೀಲಿಸುತ್ತಿದ್ದಾರೆ. ಇಲ್ಲಿಯವರೆಗೆ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ. ಇದು ಹುಸಿ ಬೆದರಿಕೆ ಕರೆ ಆಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
'ಮದ್ರಾಸ್ ಟೈಗರ್ಸ್' ಎಂಬ ಅಪರಿಚಿತ ಸಂಘಟನೆಯಿಂದ ಇಮೇಲ್ ಬಂದಿದ್ದು, ಇಡೀ ಕಟ್ಟಡವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಸದ್ಯ ಪೊಲೀಸರು ಆಗಮಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೈಕೋರ್ಟ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆದರಿಕೆಯಿಂದ ನ್ಯಾಯಾಲಯದ ಕಾರ್ಯಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗಿಲ್ಲ. ನಿಗದಿಯಂತೆ ನ್ಯಾಯಮೂರ್ತಿಗಳು ಪ್ರಕರಣಗಳನ್ನು ಆಲಿಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.