ADVERTISEMENT

ಛತ್ತೀಸಗಢ: ₹65 ಸಾವಿರ ಕೋಟಿ ಹೂಡಿಕೆ ಘೋಷಿಸಿದ ಗೌತಮ್ ಅದಾನಿ

ಪಿಟಿಐ
Published 12 ಜನವರಿ 2025, 11:07 IST
Last Updated 12 ಜನವರಿ 2025, 11:07 IST
<div class="paragraphs"><p>ಗೌತಮ್ ಅದಾನಿ ಹಾಗೂ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್&nbsp; ಭೇಟಿ&nbsp;</p></div>

ಗೌತಮ್ ಅದಾನಿ ಹಾಗೂ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್  ಭೇಟಿ 

   

– ಎಕ್ಸ್ ಚಿತ್ರ (@ChhattisgarhCMO)

ರಾಯಪುರ: ಕೈಗಾರಿಕೋದ್ಯಮಿ ಗೌತಮ್ ಅದಾನಿ ಹಾಗೂ ಛತ್ತೀಸಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಭಾನುವಾರ ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದಲ್ಲಿ ಇಂಧನ ಹಾಗೂ ಸಿಮೆಂಟ್‌ ಕ್ಷೇತ್ರದಲ್ಲಿ ₹65 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಅದಾನಿ ಘೋಷಿಸಿದ್ದಾರೆ.

ADVERTISEMENT

ರಾಜ್ಯ ರಾಜಧಾನಿ ರಾಯಪುರದಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ನಡೆಯಿತು ಎಂದು ರಾಜ್ಯ ಸಾರ್ವಜನಿಕ ಸಂಪರ್ಕ ಇ‌ಲಾಖೆ ಹೇಳಿದೆ.

ರಾಯ್ಪುರ, ಕೊರ್ಬಾ ಹಾಗೂ ರಾಯಗಢದಲ್ಲಿರುವ ವಿದ್ಯುತ್ ಸ್ಥಾವರಗಳ ವಿಸ್ತರಣೆಗೆ ₹60 ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಅದಾನಿ ಘೋಷಿಸಿದ್ದಾರೆ. ಇದರಿಂದ ರಾಜ್ಯದ ವಿದ್ಯುತ್ ಉತ್ಪಾದನೆ 6,120 ಮೆಗಾವ್ಯಾಟ್‌ನಷ್ಟು ಹೆಚ್ಚಳವಾಗಲಿದೆ.

ಅಲ್ಲದೆ ರಾಜ್ಯದಲ್ಲಿರುವ ಸಿಮೆಂಟ್ ಕಾರ್ಖಾನೆಯ ವಿಸ್ತರಣೆಗೆ ₹5 ಸಾವಿರ ಕೋಟಿ ಹೂಡಿಕೆ ಮಾಡಲಿದೆ.

ಇದರ ಜೊತೆಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಅಡಿಯಲ್ಲಿ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ ಮತ್ತು ಪ್ರವಾಸೋದ್ಯಮಕ್ಕೆ ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರಕ್ಕೆ ₹10 ಸಾವಿರ ಕೋಟಿ ನೀಡುವುದಾಗಿ ಅದಾನಿ ಹೇಳಿದ್ದಾಗಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.