ADVERTISEMENT

ಲೋಕಸಭೆ ಚುನಾವಣೆಗೂ ಮುನ್ನ ಸಂಸದ ಗೌತಮ್ ಗಂಭೀರ್ ರಾಜಕೀಯಕ್ಕೆ ವಿದಾಯ! ಕಾರಣವೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮಾರ್ಚ್ 2024, 5:57 IST
Last Updated 2 ಮಾರ್ಚ್ 2024, 5:57 IST
<div class="paragraphs"><p>ಗೌತಮ್&nbsp;ಗಂಭೀರ್</p></div>

ಗೌತಮ್ ಗಂಭೀರ್

   

ಪಿಟಿಐ ಚಿತ್ರ

ನವದೆಹಲಿ: ತಮ್ಮನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸಿ ಎಂದು ಕೋರಿ ದೆಹಲಿ ಸಂಸದ ಗೌತಮ್‌ ಗಂಭೀರ್‌ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಶನಿವಾರ ಮನವಿ ಮಾಡಿದ್ದಾರೆ.

ADVERTISEMENT

ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಪೂರ್ವ ದೆಹಲಿ ಸಂಸದರಾಗಿರುವ ಗಂಭೀರ್‌, ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಧನ್ಯವಾದ ಹೇಳಿದ್ದಾರೆ.

ಈ ಕುರಿತು ಎಕ್ಸ್‌/ಟ್ವಿಟರ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಗಂಭಿರ್, 'ಕ್ರಿಕೆಟ್‌ ಸಂಬಂಧಿತ ಜವಾಬ್ದಾರಿಗಳತ್ತ ಗಮನ ಹರಿಸಬೇಕಾಗಿರುವುದರಿಂದ ನನ್ನನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಪಕ್ಷದ ಗೌರವಾನ್ವಿತ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಜನರ ಸೇವೆ ಮಾಡುವುದಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ. ಜೈ ಹಿಂದ್‌' ಎಂದು ಬರೆದುಕೊಂಡಿದ್ದಾರೆ.

ಭಾರತ ತಂಡದ ಮಾಜಿ ಕ್ರಿಕೆಟಿಗರಾಗಿರುವ ಗಂಭೀರ್‌, 2007ರಲ್ಲಿ ಟಿ20 ಹಾಗೂ 2011ರಲ್ಲಿ ಏಕದಿನ ವಿಶ್ವಕಪ್‌ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದರು.

ಟೀಂ ಇಂಡಿಯಾ ಪರ 147 ಏಕದಿನ, 58 ಟೆಸ್ಟ್‌ ಹಾಗೂ 37 ಟಿ20 ಪಂದ್ಯಗಳಲ್ಲಿ ಆಡಿರುವ ಅವರು, ಕ್ರಮವಾಗಿ 5,238 ರನ್‌, 4,154 ರನ್‌ ಹಾಗೂ 932 ರನ್ ಕಲೆಹಾಕಿದ್ದಾರೆ. 154 ಐಪಿಎಲ್‌ ಪಂದ್ಯಗಳಿಂದ 4,218 ರನ್ ಗಳಿಸಿದ್ದಾರೆ.

ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ತಂಡವು ಗಂಭಿರ್‌ ನಾಯಕತ್ವದಲ್ಲಿ 2012 ಹಾಗೂ 2014ರಲ್ಲಿ ಚಾಂಪಿಯನ್‌ ಪಟ್ಟಕ್ಕೇರಿತ್ತು. ಕಳೆದ ಎರಡು ಆವೃತ್ತಿಗಳಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ಮೆಂಟರ್‌ ಆಗಿದ್ದ ಅವರು ಇದೀಗ ಮತ್ತೆ, ಕೆಕೆಆರ್‌ ತಂಡದ ಮೆಂಟರ್‌ ಆಗಿ ನೇಮಕಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.