ADVERTISEMENT

ಉತ್ತರ ಪ್ರದೇಶ: ಮಾಜಿ ಸಚಿವ ಪ್ರಜಾಪತಿ ವಿರುದ್ಧ ಎಫ್‌ಐಆರ್‌

ಮರಳು ಗಣಿಗಾರಿಕೆ ಹಗರಣ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 18:29 IST
Last Updated 10 ಜುಲೈ 2019, 18:29 IST

ನವದೆಹಲಿ: ಉತ್ತರ ಪ್ರದೇಶದಲ್ಲಿ ಮರಳು ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಹಾಗೂ ನಾಲ್ವರು ಐಎಎಸ್‌ ಅಧಿಕಾರಿಗಳ ವಿರುದ್ಧ ಸಿಬಿಐ ಮತ್ತೆರಡು ಹೊಸ ಪ್ರಕರಣಗಳನ್ನು ದಾಖಲಿಸಿದ್ದು, 12 ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ಈ ಹಗರಣ ನಡೆದಿದೆ. ಈ ಸಮಯದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿವೇಶ್‌ ನಂದನ್‌, ವಿಶೇಷ ಕಾರ್ಯದರ್ಶಿಯಾಗಿದ್ದ ಸಂತೋಷ್‌ ಕುಮಾರ್‌, ಜಿಲ್ಲಾಧಿಕಾರಿಗಳಾಗಿದ್ದ ಅಭಯ ಮತ್ತು ವಿವೇಕ್‌ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT