ADVERTISEMENT

ಇಂಧನದ ತೆರಿಗೆ ಕಡಿತಗೊಳಿಸಲು ಕೇಂದ್ರಕ್ಕೆ ರಾಜಸ್ಥಾನ ಸಿಎಂ ಗೆಹ್ಲೋಟ್ ಒತ್ತಾಯ

ಪಿಟಿಐ
Published 15 ನವೆಂಬರ್ 2021, 14:33 IST
Last Updated 15 ನವೆಂಬರ್ 2021, 14:33 IST
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್   

ಜೈಪುರ: ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಜನಸಾಮಾನ್ಯರನ್ನು ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರದ ತಪ್ಪು ನೀತಿಯಿಂದಾಗಿ ಹಣದುಬ್ಬರ ಹೆಚ್ಚಳಗೊಂಡಿದೆ. ಹಾಗಾಗಿ ಕೇಂದ್ರ ಸರ್ಕಾರವು ಇಂಧನದ ಅಬಕಾರಿ ಸುಂಕವನ್ನು ಮತ್ತಷ್ಟು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಕಳೆದೊಂದು ವರ್ಷದಲ್ಲಿ ಇಂಧನ ಬೆಲೆ ₹25 ಹೆಚ್ಚಿಸಲಾಗಿದೆ. ಜನಸಾಮಾನ್ಯರು ಇದರಿಂದ ತೊಂದರೆ ಅನುಭವಿಸುತ್ತಿದ್ದಾರೆ. ಹಣದುಬ್ಬರವನ್ನು ನಿಯಂತ್ರಣಕ್ಕೆ ತರಲು ಇಂಧನದ ಅಬಕಾರಿ ಸುಂಕವನ್ನು ಮತ್ತಷ್ಟು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಜನರ ಹಾಗೂ ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರವು, ಇತ್ತೀಚೆಗಷ್ಟೇ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.