ಸ್ಫೋಟ
–ಪಿಟಿಐ ಚಿತ್ರ
ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಸೀದಿಯೊಂದರಲ್ಲಿ ಇಂದು (ಭಾನುವಾರ) ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಯೋರೈ ತಹಸಿಲ್‌ನ ಮಸ್ಲಾ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ಮಸೀದಿಯ ಒಳಭಾಗಕ್ಕೆ ಹಾನಿಯಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸ್ಫೋಟ ಸಂಭವಿಸಿದ ವೇಳೆ ಮಸೀದಿಯೊಳಗೆ ಯಾರು ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.