ADVERTISEMENT

ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಹಿಂಜರಿಯುವುದಿಲ್ಲ: ಬಿಪಿನ್‌ ರಾವತ್‌

ಪಾಕಿಸ್ತಾನ ಗಡಿ ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗೆ ಕಡಿವಾಣ: ರಾವತ್‌

ಪಿಟಿಐ
Published 15 ಜನವರಿ 2019, 18:47 IST
Last Updated 15 ಜನವರಿ 2019, 18:47 IST
ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ 
ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌    

ನವದೆಹಲಿ: ‘ಪಾಕಿಸ್ತಾನ ಗಡಿಯಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತೀಯ ಸೇನೆಯು ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ’ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿದ್ದಾರೆ.

ಸೇನಾ ದಿನದ ಅಂಗವಾಗಿ ಇಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೇನಾ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು,‘ದೇಶದ ಪಶ್ಚಿಮ ಗಡಿಯಲ್ಲಿ (ಪಾಕಿಸ್ತಾನ ಭಾಗದಲ್ಲಿ) ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವುದು ಹೇಗೆ ಎನ್ನುವುದು ಸೇನೆಗೆ ಚೆನ್ನಾಗಿ ಗೊತ್ತಿದೆ. ಆದರೆ, ಜಮ್ಮು–ಕಾಶ್ಮೀರದ ಜನ ಸೇನೆಗೆ ನೈತಿಕ ಬೆಂಬಲ ನೀಡಬೇಕು’ ಎಂದು ಅವರು ಹೇಳಿದರು.

‘ದೇಶದ ಪೂರ್ವ ಗಡಿ ಭಾಗದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆಯೂ ಸೇನೆ ನಿಗಾ ಇಟ್ಟಿದೆ. ಗಡಿ ರಕ್ಷಣೆ ವಿಷಯದಲ್ಲಿ ನಮ್ಮ ಯೋಧರು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ಅವರು ಚೀನಾಗೆ ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.