ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ವಾಯುಪಡೆ ಹೆಲಿಕಾಪ್ಟರ್ ಪತನದಲ್ಲಿ ಮೃತರಾಗಿದ್ದ ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತಿಮ ಸಂಸ್ಕಾರವನ್ನು ಇಲ್ಲಿನ ಕಂಟೋನ್ಮೆಂಟ್ ಪ್ರದೇಶದಲ್ಲಿ ಇರುವ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ಸಕಲ ಸೇನಾ ಗೌರವಗಳೊಂದಿಗೆಶುಕ್ರವಾರ ಸಂಜೆ ನಡೆಸಲಾಯಿತು.
ರಾವತ್ ಅವರ ಪುತ್ರಿಯರಾದ ತಾರಿಣಿ ಮತ್ತು ಕೃತಿಕಾ ಅವರು ತಂದೆ–ತಾಯಿಯ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು.
ಇದೇ ದುರಂತದಲ್ಲಿ ಮೃತಪಟ್ಟಿದ್ದ ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಲಿದ್ದರ್ ಅವರ ಅಂತಿಮ ಸಂಸ್ಕಾರವನ್ನು ಶುಕ್ರವಾರ ಬೆಳಿಗ್ಗೆ ಇದೇ ಚಿತಾಗಾರದಲ್ಲಿ ನೆರವೇರಿಸಲಾಯಿತು. ಅಪಘಾತದಲ್ಲಿ ಮೃತಪಟ್ಟ ಇನ್ನೂ 10 ಮಂದಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಗುರುತು ಪತ್ತೆಯಾದ ನಂತರ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.