ADVERTISEMENT

ಕಾಂಗ್ರೆಸ್‌ ಸೇರಿ ಎಲ್ಲಾ ಪಕ್ಷಗಳು ಜನರಲ್ಲಿ ಒಡಕು ಮೂಡಿಸುತ್ತಿವೆ: ಆಜಾದ್‌

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 14:12 IST
Last Updated 20 ಮಾರ್ಚ್ 2022, 14:12 IST
ಗುಲಾಂ ನಬಿ ಅಜಾದ್‌
ಗುಲಾಂ ನಬಿ ಅಜಾದ್‌   

ನವದೆಹಲಿ: ಕಾಂಗ್ರೆಸ್‌ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಜನರ ನಡುವೆ ಒಡಕು ಮೂಡಿಸುತ್ತಿದೆ ಎಂದು ಕಾಂಗ್ರೆಸ್‌ನಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಭಾನುವಾರ ಹೇಳಿದ್ದಾರೆ.

‘ಧರ್ಮ, ಜಾತಿ ಆಧಾರದಲ್ಲಿ ರಾಜಕೀಯ ಪಕ್ಷಗಳು 24x7 ಜನರನ್ನು ವಿಭಜಿಸುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದಂತೆ ಯಾವುದೇ ಪಕ್ಷವನ್ನು ನಾನು ಕ್ಷಮಿಸುವುದಿಲ್ಲ. ನಾಗರಿಕ ಸಮಾಜವು ಒಗ್ಗಟ್ಟಿನಿಂದ ಇರಬೇಕು. ಜಾತಿ, ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ನ್ಯಾಯ ಒದಗಿಸಬೇಕು’ ಎಂದೂ ಜಿ–23 ಗುಂಪಿನ ನಾಯಕ ಆಜಾದ್‌ ತಿಳಿಸಿದ್ದಾರೆ.

‘ದಿ ಕಾಶ್ಮೀರ್‌ ಫೈಲ್ಸ್‌’ ಚಿತ್ರದ ಕುರಿತು ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಏನು ನಡೆದಿದೆಯೋ ಅದಕ್ಕೆ ಪಾಕಿಸ್ತಾನ ಮತ್ತು ಭಯೋತ್ಪಾದಕರೇ ನೇರ ಹೊಣೆ. ಹಿಂದೂಗಳು, ಕಾಶ್ಮೀರಿ ಪಂಡಿತರು, ಕಾಶ್ಮೀರದ ಮುಸ್ಲಿಮರು ಮತ್ತು ಡೋಗ್ರಾಗಳು ಕೂಡ ಇದರಿಂದ ತೊಂದರೆಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.