ADVERTISEMENT

ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಬಾಂಬ್‌ ಸ್ಫೋಟ: 9 ವರ್ಷದ ಬಾಲಕಿ ಸಾವು

ಪಿಟಿಐ
Published 23 ಜೂನ್ 2025, 15:32 IST
Last Updated 23 ಜೂನ್ 2025, 15:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತ: ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಕಾಳಿಗಂಜ್‌ ಸಮೀಪದ ಬರಾಚಂದ್‌ಗರ್‌ ಬಳಿ ಸೋಮವಾರ ಮಧ್ಯಾಹ್ನ ಬಾಂಬ್‌ ಸ್ಫೋಟಗೊಂಡು 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಕಾಳಿಗಂಜ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ.

‘ಈ ಘಟನೆಯಿಂದ ತೀವ್ರ ಆಘಾತವಾಗಿದ್ದು, ದುಃಖಿತಗೊಂಡಿದ್ದೇನೆ. ಅವರ ಕುಟುಂಬದವರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಲಿದ್ದಾರೆ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.