ADVERTISEMENT

ಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕಬ್ಬಿಣದ ರಾಡ್‌ನಿಂದ ಹಲ್ಲೆ

ಪಿಟಿಐ
Published 3 ಸೆಪ್ಟೆಂಬರ್ 2020, 11:19 IST
Last Updated 3 ಸೆಪ್ಟೆಂಬರ್ 2020, 11:19 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ 15ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.

ಮೂವರು ವ್ಯಕ್ತಿಗಳು ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಆಕೆ ದುಷ್ಕರ್ಮಿಗಳ ಕೈಯಿಂದ ಬಿಡಿಸಿಕೊಳ್ಳಲು ಯತ್ನಿಸಿದಾಗ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಲಾಗಿದೆ ಎಂದು ಬರೇಲಿ ಎಸ್‌ಎಸ್‌ಪಿ ಶೈಲೇಶ್ ಕುಮಾರ್ ಪಾಂಡೆ ಹೇಳಿದ್ದಾರೆ.

ಒಬ್ಬ ಆರೋಪಿ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಅತ್ಯಾಚಾರದ ಬಗ್ಗೆ ದೂರು ನೀಡಿದರೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಸಂತ್ರಸ್ತೆಯ ಅಪ್ಪ ನೀಡಿದ ದೂರಿನ ಮೇರೆಗೆ ಆರೋಪಿಗಳಾದಮೋಹಿತ್ (25), ಸುಮಿತ್(27) ಮತ್ತು ಅಂಕಿತ್ (24) ಎಂಬವರ ವಿರುದ್ಧ ಕೇಸು ದಾಖಲಿಸಲಾಗಿದೆ.

ಮೋಹಿತ್ ಮತ್ತು ಸುಮಿತ್‌ನ್ನು ಬುಧವಾರ ಬಂಧಿಸಿದ್ದು, ಅಂಕಿತ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.