ADVERTISEMENT

ಅತ್ಯಾಚಾರ: ಬಾಲಕಿ ಆತ್ಮಹತ್ಯೆ, ಆರೋಪಿ ಬಂಧನ

ಪಿಟಿಐ
Published 4 ಫೆಬ್ರುವರಿ 2023, 15:41 IST
Last Updated 4 ಫೆಬ್ರುವರಿ 2023, 15:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸುಲ್ತಾನ್‌ಪುರ: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಡಿ 19 ವರ್ಷದ ಯುವಕನನ್ನು ಶನಿವಾರ ಬಂಧಿಸಲಾಗಿದೆ. ಈ ಘಟನೆಯಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಮಂಗಳವಾರ ಕುರಾವರ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮರುದಿನ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ನಂತರ ಘಟನೆಯ ಮಾಹಿತಿ ಲಭಿಸಿತು ಎಂದು ಎಂದು ತಿಳಿಸಿದ್ದಾರೆ.

ಆರೋಪಿ ಸೌರಭ್‌ ಅಗ್ರಹರಿ ಸಹೋದರಿಯು ಬಾಲಕಿಯ ಮನೆ ಪಕ್ಕದಲ್ಲಿರುವವರನ್ನು ವಿವಾಹವಾಗಿದ್ದು, ಮಂಗಳವಾರ ಆಕೆಯನ್ನು ಭೇಟಿಯಾಗಲು ಬಂದಿದ್ದ ಆತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯು ಬಾಲಕಿಗೆ ಪರಿಚಿತರು ಎಂದು ಪೊಲೀಸ್‌ ಠಾಣಾಧಿಕಾರಿ ಸಂದೀಪ್‌ ಕುಮಾರ್‌ ರೈ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.