
ಜೈಪುರ: ಬಿಕಾನೇರ್ ಜಿಲ್ಲೆಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ದೇಶ್ನೋಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರೇವತ್ ರಾಮ್, ಓಂಪ್ರಕಾಶ್ ದುದಿ ಹಾಗೂ ಲೀಲಾಧರ್ ಗೋಡಾರ ಆರೋಪಿಗಳು.
‘ಆರೋಪಿಗಳು ಬಾಲಕಿಯನ್ನು ಮಂಗಳವಾರ ಅಪಹರಣ ಮಾಡಿ, ಬಲವಂತದಿಂದ ಪಾನೀಯ ಕುಡಿಸಿದ್ದಾರೆ. ಇದರಿಂದ ಬಾಲಕಿ ಪ್ರಜ್ಞೆ ತಪ್ಪಿದೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳು, ನಂತರ ಗ್ರಾಮದ ಬಳಿ ಆಕೆಯನ್ನು ಬಿಟ್ಟು ಹೋಗಿದ್ದರು’ ಎಂದು ಪೊಲೀಸ್ ಅಧಿಕಾರಿ ಸುಮನ್ ಶೆಖಾವತ್ ಹೇಳಿದ್ದಾರೆ.
ಕೃತ್ಯದ ಕುರಿತು ಬಾಲಕಿ ತನ್ನ ಕುಟುಂಬಸ್ಥರಿಗೆ ವಿವರಿಸಿದ್ದು, ಅವರು ನೀಡಿರುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆ ಹಾಗೂ ಆರೋಪಿಗಳು ಒಂದೇ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.